ಪತ್ರಕರ್ತನಿಗೆ ಅವಾಚ್ಯ ಶಬ್ದ ಗಳಿಂದ ನಿಂದಿಸಿ ಜೀವ ಬೆದರಿಕೆ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ವಿರುದ್ಧ ಬೀದರ್ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಗಳಿಗೆ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕ ಬೀದರ್ ಮನವಿ,
ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ಕ್ಷೇತ್ರ ಒಂದರ ಸಮಸ್ಯೆ ಕುರಿತು ಸ್ಥಳೀಯ ವರದಿಗಾರನೊಬ್ಬರು ವರದಿ ಮಾಡಿದರು ವರದಿಗೆ ಸ್ಪಂದಿಸಬೇಕಾದ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಇದಕ್ಕೆ ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಯಿಂದ ರಾಜ್ಯದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು ರಾಜ್ಯಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆದೇಶದ ಮೆರೆಗೆ ಜಿಲ್ಲಾ ಹಾಗೂ ತಾಲೂಕು ಘಟಕ ದಿಂದ ಮುಖ್ಯ ಮಂತ್ರಿ ಗಳಿಗೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ ಬೀದರ್ ಜಿಲ್ಲೆಯಲ್ಲೂ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕ ಬೀದರ್ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿ ಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು,
ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಬಸವರಾಜ ಪವಾರ್ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಮಾತನಾಡಿರುವುದು ಖಂಡನೀಯ ಅವರನ್ನು ಶಾಸಕ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿದರು,
ಇದೆ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ ಮೋಸಿನ ಅಲಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯ ನಡೆ ಖಂಡನೀಯ ಮುಖ್ಯಮಂತ್ರಿ ಗಳು ಇದರ ಕುರಿತು ಗಮನ ಹರಿಸಿ ಶಾಸಕರ ಮೇಲೆ ಕ್ರಮ ಜರುಗಿಸಬೇಕೆಂದು ಹಾಗೂ ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಪವಾರ್, ಪ್ರಧಾನ ಕಾರ್ಯದರ್ಶಿ ಸೈಯದ್ ಮೋಸಿನ ಅಲಿ, ಜಿಲ್ಲಾ ಖಜಾಂಚಿ ಜೋನ್ಸನ್ ಘೋಳೆ, ರಾಜ್ಯಉಪಾಧ್ಯಕ್ಷ ಶಶಿಶೆಟಗಾರ್, ಅಥರ್ ಖಾನ, ಪಪ್ಪುರಾಜ,ಪ್ರದೀಪ್ ಕುಮಾರ್ ಸೇರಿದಂತೆ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು
Comments
Post a Comment